Latest

ಬಿಜೆಪಿ ಭಿನ್ನಮತೀಯರಿಗೆ ದೊಡ್ಡ ಶಾಕ್ ನೀಡಿದ ಅರುಣ ಸಿಂಗ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯಾವ ಶಾಸಕರ ಜೊತೆಯೂ ನಾಯಕತ್ವ ಬದಲಾವಣೆ ಚರ್ಚೆಯಾಗಿಲ್ಲ. ಆದರೆ ಒಂದಿಬ್ಬರು ಇಂತಹ ಹೇಳಿಕೆ ನೀಡುವ ಮೂಲಕ ಪಕ್ಷದ ಘನತೆಗೆ ದಕ್ಕೆ ತರುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಹೇಳಿದ್ದಾರೆ.

ಬಿಜೆಪಿ ಶಾಸಕರು, ಕಾರ್ಯಕರ್ತರ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೇಳೆ ಮಾಡಿದ ಕೆಲಸಗಳ ಬಗ್ಗೆ, ಪಕ್ಷ ಸಂಘಟನೆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ನಾಯಕತ್ವ ಬದಲಾವಣೆ ಬಗ್ಗೆ ಚರ್ಚಿಸಿಲ್ಲ. ಆದರೆ ಇಬ್ಬರು ಶಾಸಕರು ಇಂತಹ ಹೇಳಿಕೆ ನೀಡಿದ್ದಾರೆ. ಅವರಿಂದ ಪಕ್ಷದ ಘನತೆಗೆ ಧಕ್ಕೆಯಾಗುತ್ತಿದೆ. ಈ ಬಗ್ಗೆ ರಾಜ್ಯಾಧ್ಯಕ್ಷ ನಳೀನ್ ಕಟೀಲ್ ಅವರಿಂದ ಮಾಹಿತಿ ಸಂಗ್ರಹಿಸಿದ್ದೇನೆ ಎಂದರು.

Home add -Advt

ಇಬ್ಬರೂ ಹೊಸಬರು, ಪಕ್ಷದ ಸಿದ್ಧಾಂತ, ರೀತಿ ರಿವಾಜಿನ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಆದರೆ ಯಾರೋ ಒಂದಿಬ್ಬರ ಹೇಳಿಕೆ ಪಕ್ಷಕ್ಕೆ ಮುಜುಗರವನ್ನುಂಟುಮಾಡುವ ಕೆಲಸವಾಗಬಾರದು. ಇದರಿಂದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗುತ್ತಿದೆ. ಅಂತವರ ವಿರುದ್ಧ ಸೂಕ್ತ ಸಮಯದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಮೊದಲು ತೀರ್ಪು, ನಂತರ ವಿಚಾರಣೆ ಇದು ಅರುಣ ಸಿಂಗ್ ಸ್ಟೈಲ್!

ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಗಂಭೀರ : ಸಿದ್ದರಾಮಯ್ಯ

Related Articles

Back to top button