Latest

ಬಿಎಸ್ ವೈ ಸರ್ಕಾರದ ಕಾರ್ಯವೈಖರಿಗೆ ಅರುಣ್ ಸಿಂಗ್ ಮೆಚ್ಚುಗೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದು, ಕೋವಿಡ್ ಸಂದರ್ಭದಲ್ಲಿ ಸರ್ಕಾರ ಸ್ಪಂದಿಸಿದ ರೀತಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ನಡೆದ ಚರ್ಚೆ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸಿರುವ ಅರುಣ್ ಸಿಂಗ್, ಸಚಿವರಿಗುಳ ಜೊತೆ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ನಾನು 3 ದಿನಗಳ ರಾಜ್ಯ ಪ್ರವಾಸಕ್ಕೆ ಬಂದಿದ್ದೇನೆ. ಪಕ್ಷ ಸಂಘಟನೆ, ಕೋವಿಡ್ ವಿಚಾರದ ಬಗ್ಗೆ ಸಿಎಂ ಹಾಗೂ ಸಚಿವರ ಜೊತೆ ಚರ್ಚಿಸುತ್ತೇನೆ ಎಂದರು.

ಕೋವಿಡ್ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾದ ಜನರಿಗೆ ರಾಜ್ಯ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. ಅಲ್ಲದೇ ಕೊರೊನಾದಿಂದ ಮಡಿದ ಬಿಪಿಎಲ್ ಕಾರ್ಡ್ ದಾರರಿಗೆ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿಸಿರುವುದು ಶ್ಲಾಘನೀಯ. ಬಿಎಸ್ ವೈ ನೇತೃತ್ವದಲ್ಲಿ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಈ ಬಗ್ಗೆ ಈಗಾಗಲೇ ನಾನು ಸಾಕಷ್ಟು ಬಾರಿ ಹೇಳಿದ್ದೇನೆ. ಪದೇ ಪದೇ ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು. ಈ ಮೂಲಕ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಯಾವುದೇ ಗುಟ್ಟುಬಿಟ್ಟುಕೊಟ್ಟಿಲ್ಲ.

ಇನ್ನು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಸಚಿವರ ಮಹತ್ವದ ಸಭೆ ನಡೆಸಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ 27 ಸಚಿವರು ಭಾಗಿಯಾಗಿದ್ದಾರೆ.
ಬದಲಾವಣೆ ಚರ್ಚೆಗೆ ಪ್ರತಿಕ್ರಿಯಿಸಲು ಅರುಣ್ ಸಿಂಗ್ ನಕಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button