ಪ್ರಗತಿವಾಹಿನಿ ಸುದ್ದಿ; ಇಟಾನಗರ: ದೇಶದ ವಿವಿಧ ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆ ಅಬ್ಬರದ ನಡುವೆ ಅರುಣಾಚಲಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿ 8 ತಿಂಗಳ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಮಳೆಯಿಂದಾಗಿ ಕೆಲ ದಿನಗಳಿಂದ ಅರುಣಾಚಲಪ್ರದೇಶದಲ್ಲಿ ಭೂಕುಸಿತವುಂತಾಗುತ್ತಿದ್ದು, ಇಂದು ಮಧ್ಯಾಹ್ನ ಪಪುಂಪರೆ ಜಿಲ್ಲೆಯ ತಿಗ್ದೋ ಗ್ರಾಮದಲ್ಲಿ ಭೂ ಕುಸಿತದಿಂದಾಗಿ ಈ ದುರ್ಘಟನೆ ಸಂಭವಿಸಿದೆ.
ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಜೀವಂತ ಸಮಾಧಿಯಾಗಿದ್ದಾರೆ. ವಿಷಯ ತಿಳಿದ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.
ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸಿಎಂ ಪೇಮ ಖಂಡು, ಮೃತ ಕುಟುಂಬಸ್ಥರಿಗೆ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ