ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮತ್ತೆ ಆರಂಭವಾಗಿದ್ದು, ಇದೀಗ ರಾಜಕಾರಣಿಗಳು ಕೂಡ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ 30 ಶಾಸಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಬೆನ್ನಲ್ಲೇ ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಕೋವಿಡ್ ದೃಢಪಟ್ಟಿದೆ.
ಈ ಕುರಿತು ಸ್ವತ: ಸಿಎಂ ಕೇಜ್ರಿವಾಲ್ ಟ್ವೀಟ್ ಮಾಡಿದ್ದು, ತಮಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಸಣ್ಣ ಪ್ರಮಾಣದ ಲಕ್ಷಣಗಳು ಕಂಡುಬಂದಿದೆ. ವೈದ್ಯರ ಸಲಹೆ ಮೇರೆಗೆ ಐಸೋಲೇಷನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.
ಅಲ್ಲದೇ ಕೆಲದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಕೊಂಡು ಕ್ವಾರಂಟೈನ್ ಆಗಿ ಎಂದು ಸಲಹೆ ನೀಡಿದ್ದಾರೆ.
ಹಿಂದಿನ ಲಾಕ್ ಡೌನ್ ನುಂಗಿದ ಬದುಕು….
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ