ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿಯಲ್ಲಿ ಕರೋನಾ ಪೀಡಿತರ ಸಂಖ್ಯೆ ಲಕ್ಷ ದಾಟುತ್ತಿದ್ದರೂ ಜನ ಭಯಪಡುವ ಅಗತ್ಯವಿಲ್ಲ. ಏಕೆಂದರೆ ಆ ಲಕ್ಷದ ಪೈಕಿ ಈಗಾಗಲೇ 72,000 ಜನ ಗುಣಮುಖರಾಗಿದ್ದಾರೆ. ಅಲ್ಲದೇ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಸಹ ಆರಂಭಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಪ್ಲಾಸ್ಮಾ ದಾನ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
25 ಸಾವಿರ ಪ್ರಕರಣಗಳಲ್ಲಿ 15 ಸಾವಿರ ಜನರಿಗೆ ಮನೆಗಳಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ದೆಹಲಿಯಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರೋ ಸಂಖ್ಯೆಯಲ್ಲಿ ಇಳಿಕೆ ಆಗುತ್ತಿದೆ. ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್ ನಾವು ಆರಂಭಿಸಿದ್ದೇವೆ. ಪ್ಲಾಸ್ಮಾ ಥೆರಪಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದರು.
ಕಳೆದ ವಾರ ದೆಹಲಿಯಲ್ಲಿ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ನಾವು ಜೂನ್ ತಿಂಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದೇವೆ. ಪ್ರತಿದಿನ 20ರಿಂದ 24 ಸಾವಿರ ಪರೀಕ್ಷೆ ನಡೆಸುತ್ತಿದ್ದೇವೆ. ಈ ಮೊದಲು ಹಾಸಿಗೆಗಳ ಸಮಸ್ಯೆ ಇತ್ತು. ಈಗ ಎಲ್ಲಾ ಆಸ್ಪತ್ರೆಗಳಲ್ಲಿ ಸರಿ ಸುಮಾರು 5,100 ರೋಗಿಗಳಿದ್ದಾರೆ. ಸುಮಾರು 10,000 ಹಾಸಿಗೆಗಳು ಖಾಲಿಯಾಗಿವೆ ಎಂದು ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ