ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾರ್ಚ್ 21ರಂದು ಬಂಗಾಳ ಕೊಲ್ಲಿಯಲ್ಲಿ ಈ ವರ್ಷದ ಮೊದಲ ಚಂಡಮಾರುತ ಅಸನಿ ಚಂಡಮಾರುತ ಅಪ್ಪಳಿಸಲಿದ್ದು, ಸಮುದ್ರ ತೀರಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಅಂಡಮಾನ್, ನಿಕೋಬಾರ್ ದ್ವೀಪಗಳ ಉದ್ದಕ್ಕೂ ಚಂಡಮಾರುತ ಬೀಸಲಿದ್ದು, ಮಾರ್ಚ್ 22ರಂದು ಬಾಮ್ಗ್ಲಾದೇಶ, ಉತ್ತರ ಮಯನ್ಮಾರ್ ಕರಾವಳಿಗೆ ತಲುಪಲಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.
ಗಂಟೆಗೆ 70-90ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, 2022ರಲ್ಲಿ ಭಾರತಕ್ಕೆ ಅಪ್ಪಳಿಸುತ್ತಿರುವ ಮೊದಲ ಚಂಡಮಾರುತ ಇದಾಗಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಆರ್ಭಟ ಹೆಚ್ಚು ಪ್ರಭಾವ ಬೀರಲಿದೆ. ಅಸನಿ ಚಂಡಮಾರುತ ಭೀತಿ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಈಗಾಗಲೇ ನೌಕಾಪಡೆ, ವಾಯುಪಡೆ, ಸೇನಾ ಪಡೆ ಸಿದ್ಧವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಶಿರಸಿಯಲ್ಲಿ ಗಾಳಿ, ಮಳೆಯ ಅಬ್ಬರ ; ಕಂಗೆಟ್ಟ ಜಾತ್ರೆ ಪೇಟೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ