
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಸನಿ ಚಂಡಮಾರುತದ ಪರಿಣಾಮ ಅಂಡಮಾನ್, ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮೈಸೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡ ಇಂದು ಮಳೆ ಮುಂದುವರೆಯಲಿದ್ದು, ಮುಂಜಾಗೃತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ಮತ್ತು ನೈಋತ್ಯ ಕರ್ನಾಟಕದ ಇತರ ಭಾಗಗಳಲ್ಲಿ ಮಾರ್ಚ್ 24ರವರೆಗೆ ಮಳೆಯಾಗಲಿದೆ. ದಕ್ಷಿಣ ಭಾರತದ ಹಲವೆಡೆಗಳಲ್ಲಿ ನಾಲ್ಕುದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ಇಂದಿನ ಚಿನ್ನ-ಬೆಳ್ಳಿ ದರ ಯಾವ ನಗರದಲ್ಲಿ ಎಷ್ಟಿದೆ?