Film & EntertainmentKannada NewsLatest

*ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಶಾ ಭೋಸ್ಲೆ ಅವರನ್ನು ಮುಂಬಿಅನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಆಶಾ ಭೋಸ್ಲೆ ಅವರ ಕುಟುಂಬ ವರ್ಗದವರು ಹಾಗೂ ಆಪ್ತರು ಆಸ್ಪತ್ರೆಗೆ ದೌಡಾಯಿಸಿದ್ದು, ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ.

ಆಶಾ ಭೋಸ್ಲೆ ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ. ಹಿಂದಿ, ಮರಾಠಿ, ಕನ್ನಡ, ತಮಿಳು, ತೆಲಗು, ಮಲಯಾಳಂ, ಅಸ್ಸಾಮಿ, ಭೋಜ್ ಪುರಿ, ಬೆಂಗಾಲಿ, ನೇಪಾಳಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದಾರೆ.

ಅವರ ಗಾನಸಿರಿಗೆ ಎರಡು ರಾಷ್ಟ್ರ ಪ್ರಶಸ್ತಿ, ಏಷ್ಯಾ ನೈಟಿಂಗೇಲ್, ಲತಾ ಮಂಗೇಶ್ಕರ್ ಪ್ರಶಸ್ತಿ, ಹಲವಾರಿ ಫಿಲ್ಮ್ ಫೇರ್ ಪ್ರಶಸ್ತಿಗಳು ಲಭ್ಯವಾಗಿವೆ. ಆಶಾ ಭೋಸ್ಲೆ ಅವರ ಹಾಡುಗಳು ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿಗೆ ನಾಮಿನೇಟ್ ಕೂಡ ಆಗಿದ್ದವು.

Related Articles

Back to top button