Film & EntertainmentKannada NewsLatest

*ಪಂಚಭೂತಗಳಲ್ಲಿ ಲೀನರಾದ ಸಂಗೀತ ಸಾಮ್ರಾಜ್ಞಿ ಆಶಾ ಭೋಸ್ಲೆ*

ಪ್ರಗತಿವಾಹಿನಿ ಸುದ್ದಿ: ಸಂಗೀತ ಸಾಮ್ರಾಜ್ಞಿ, ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನರಾಗಿರುವ ಹಿನ್ನೆಲೆಯಲಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಆಶಾ ಭೋಸ್ಲೆ ಏಪ್ರಿಲ್ 12ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದರು, ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿದೆ.

Home add -Advt

ಬಹುಮುಖ ಪ್ರತಿಭೆಗೆ ಹೆಸರುವಾಸಿಯಾದ ಗಾಯಕಿ ಆಶಾ ಭೋಸ್ಲೆ ಬಹು ಭಾಷೆಗಳಲ್ಲಿ ಸಾವಿರಾರು ಹಾಡುಗಳಿಗೆ ತಮ್ಮ ಕಂಠದಾನ ಮಾಡಿದ್ದಾರೆ. ಅನೇಕರು ಅವರ ನಿಧನವನ್ನು ಭಾರತೀಯ ಸಂಗೀತದಲ್ಲಿ “ಒಂದು ಯುಗದ ಅಂತ್ಯ” ಎಂದು ಕರೆದಿದ್ದಾರೆ.

ಇದಕ್ಕೂ ಮುನ್ನ ಆಶಾ ಭೋಸ್ಲೆ ಅವರ ಪಾರ್ಥೀವಶರೀರವನ್ನು ಮುಂಬೈನ ಅವರ ನಿವಾಸದಲ್ಲಿ ಇರಿಸಲಾಗಿತ್ತು.ಈ ವೇಳೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಸೇರಿದಂತೆ ಹಲವು ರಾಜಕೀಯ ಗಣ್ಯರು, ಆಶಾ ಪರೇಖ್, ಸಚಿನ್ ತೆಂಡೂಲ್ಕರ್, ಎ.ಆರ್.ರೆಹಮಾನ್ ಸೇರಿದಂತೆ ಹಲವಾರು ಸಿನಿಮಾ ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

ಬಳಿಕ ಅವರ ಪಾರ್ಥಿವಶರೀರವನ್ನು ಶಿವಾಜಿ ಪಾರ್ಕ್ ಗೆ ತರಲಾಯಿತು. ಅಸಂಖ್ಯಾತ ಅಭಿಮಾನಿಗಳು, ರಾಜಕೀಯ ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಯಿತು.


Related Articles

Back to top button