*ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ನೀಡಿದ ನಟಿ ರಮ್ಯಾ*

ಪ್ರಗತಿವಾಹಿನಿ ಸುದ್ದಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಗೆ ನಟಿ ರಮ್ಯಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 6 ದಿನಗಳಿಂದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತಂತೆ ನಟಿ ರಮ್ಯಾ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಆಶಾ ಕಾರ್ಯಕರ್ತರ ಕೊಡುಗೆ ಅಪಾರ. ಅವರಿಗೆ ನ್ಯಾಯಯುತ, ಗೌರವಾನ್ವಿತ ವೇತನ ಮತ್ತು ಸಮಯಕ್ಕೆ ಸರಿಯಾಗಿ ವೇತನ ಸಿಗಬೇಕು. ಸರ್ಕಾರದ ಭರವಸೆ ಶೀಘ್ರದಲ್ಲೇ ನಿರ್ಧಾರವಾಗಲಿದೆ ಎಂದು … Continue reading *ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ನೀಡಿದ ನಟಿ ರಮ್ಯಾ*