*ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಂಧಾನ ಯಶಸ್ವಿ*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿತ್ತು. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾ ಕಾರ್ಯಕರ್ತೆಯರ ಸಂಘಟನೆ ಮುಖಂಡರ ಜೊತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ ಎಂದು ಸಿಎಂ ಕಚೇರಿ ತಿಳಿಸಿದೆ. ಆಶಾ ಕಾರ್ಯಕರ್ತೆಯರ ಮುಖಂಡರ ಜೊತೆಗಿನ ಸಂಧಾನ ಯಶಸ್ವಿ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆಯಲು ನಿರ್ಧಾರಿಸಿದ್ದಾರೆ. *ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ*