
ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ್ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ.
ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಆನೆ ಅಶ್ವತ್ಥಾಮ ಸಾವನ್ನಪ್ಪಿದೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 38 ವರ್ಷದ ಅಶ್ವತ್ಥಾಮ ಆನೆ ಎರಡು ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ಶಾಂತ ಹಾಗೂ ಗಾಂಭೀರ್ಯಕ್ಕೆ ಹೆಸರುವಾಸಿಯಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ