
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು:‘ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಿ’ ಎಂದು ಹೇಳಿಕೆ ನೀಡುವ ಮೂಲಕ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ ಇದೀಗ ಕೊಲೆಯತ್ನ ಕೇಸ್ ದಾಖಲಿಸಲಾಗಿದೆ.
ಸಚಿವ ಅಶ್ವತ್ಥನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ಸೇರಿದಂತೆ ಹಲವರು ಕೇಸ್ ದಾಖಲಿಸಿದ್ದಾರೆ. ಸಚಿವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಅಶ್ವತ್ಥನಾರಾಯಣ, ಟಿಪ್ಪು ಹೊಡೆದಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಬೇಕು ಎಂದು ಕರೆ ನೀಡಿದ್ದರು. ಸಚಿವರ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸಚಿವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.
ಸಚಿವ ಅಶ್ವತ್ಥನಾರಾಯಣ ವಿರುದ್ಧ ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗ ಗೋಕುಲ್ ರೋಡ್ ಠಾಣೆಯಲ್ಲಿ ದೂರು ದಾಖಲಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಸಚಿವರ ವಿರುದ್ಧ ಕೊಲೆಯತ್ನ ಆರೋಪಡಡಿ ಕೇಸ್ ದಾಖಲಾಗಿದೆ.
*ಟಿಪ್ಪು ಮುಗಿಸಿದಂತೆ ಸಿದ್ದರಾಮಯ್ಯರನ್ನು ಮುಗಿಸಿಬಿಡಿ ಎಂದರೆ ಏನರ್ಥ?; ಮಾಜಿ ಸಿಎಂ ರೋಷಾಗ್ನಿ*
https://pragati.taskdun.com/siddaramaihashwaththanarayanareaction/