Latest

ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಮತ್ತೊಂದು ಆಘಾತ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತಿ ಪುನೀತ್ ರಾಜ್ ಕುಮಾರ್ ಅವರ ನಿಧನದ ಆಘಾತದಲ್ಲಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಅಶ್ವಿನಿ ಅವರ ತಂದೆ ರೇವನಾಥ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಬಿಬಿಎಂಪಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ಬಾಗಮನೆ ರೇವನಾಥ್, ದಿಢೀರ್ ಅನಾರೋಗ್ಯಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

78 ವರ್ಷದ ರೇವನಾಥ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಪತಿ ಪುನೀತ್ ರಾಜ್ ಕುಮಾರ್ ಅಗಲಿಕೆ ನೋವಲ್ಲಿದ್ದ ಅಶ್ವಿನಿ ಅವರಿಗೆ ಇದೀಗ ತಂದೆಯ ಅಗಲಿಕೆ ಮತ್ತೊಂದು ಆಘಾತವನ್ನುಂಟುಮಾಡಿದೆ.
ಹಿಜಾಬ್, ಕೇಸರಿ ಶಾಲು ವಿವಾದದ ನಡುವೆ ಕುಂಕುಮ ಅಭಿಯಾನ

Home add -Advt

Related Articles

Back to top button