Kannada NewsKarnataka NewsLatest

ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಓಲಮನಿ ಗ್ರಾಮದ ಬಳಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ.

ಬಸ್ಸು ಗೋವಾ ರಾಜ್ಯದ ಮಡಗಾಂವ್ ನಿಂದ ಬೈಲೂರು ಗ್ರಾಮಕ್ಕೆ ಸಾಗುತ್ತಿತ್ತು. ಬಸ್ ನಲ್ಲಿದ್ದವರು ಮದುವೆ ಕಾರ್ಯಕ್ರಮವೊಂದರಲ್ಲಿ  ಪಾಲ್ಗೊಳ್ಳಲು ತೆರಳುತ್ತಿದ್ದರು.

Home add -Advt

ಬೆಳಗಿನ ಜಾವ 4.30ರ ಸುಮಾರಿಗೆ ಚಾಲಕನ ಹತೋಟಿ ತಪ್ಪಿದ ಬಸ್ ಪಲ್ಟಿಯಾಯಿತು. ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಈ ಪೈಕಿ 9 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಚೇತರಿಸಿಕೊಳ್ಳುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಅಪಘಾತಕ್ಕೀಡಾದ ಬಸ್ ಸಂಪೂರ್ಣ ಜಖಂಗೊಂಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಭಗವದ್ಗೀತಾ ಜ್ಞಾನ ದಿವ್ಯಕಲಾ-ಲೋಕ

 

Related Articles

Back to top button