ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಳೆದ ತಿಂಗಳಷ್ಟೇ ಬೆಳಗಾವಿ ತಹಶೀಲ್ದಾರ್ ಕೊಠಡಿಯಲ್ಲೇ SDA ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದೀಗ ASI ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಕುರಿತಾಗಿ ಹಲವು ಅನುಮಾನಗಳು ಮೂಡಿವೆ.
ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಎಎಸ್ಐ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.
ಸೂಸೈಟ್ ಮಾಡಿಕೊಂಡ ಎಎಸ್ಐ ಶಂಭು ಮೆತ್ರಿ (50) ಎಂದು ತಿಳಿದುಬಂದಿದೆ. ಐಗಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಅವರು ಇಂದು ಅನಂತಪುರ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾವಿನ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ