Karnataka NewsLatestSports

*BREAKING: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ: ಬಹುಮಾನ ಮೊತ್ತ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಲು ಮುಂದಾಗಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸರ್ಕಾರ ನಗದು ಬಹುಮಾನ ಹೆಚ್ಚಳ ಮಾಡಿದೆ.

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಕ್ರೀಡಾಪಟುಗಳಿಗೆ 1 ಕೋಟಿ ರೂ.ಗೆ ನಗದು ಬಹುಮಾನ ಮೊತ್ತವನ್ನು ಹೆಚ್ಚಳ ಮಡಲಾಗಿದೆ. ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ವಿಜೇತರಿಗೆ 50 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಇಂದೇ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ತಿಳಿದುಬಂದಿದೆ. ಏಷ್ಯನ್ ಗೇಮ್ ಪದಕ ವಿಜೇತರಿಗೆ ಬಹುಮಾನ ಹೆಚ್ಚಳ ಮಾಡುವಂತೆ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿಸಿರೆಂ ಪರಮ್ರ‍ೇಶ್ವರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button