
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಎಸ್ ಐ ಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಆರೋಪಿಯನ್ನು ರೈಲ್ವೆ ಭದ್ರತಾದಳದಲ್ಲಿ ಎಎಸ್ ಐ ಆಗಿ ಸೇವೆ ಸಲ್ಲಿಸುತ್ತಿದ್ದ ತಂಗಚ್ಚನ್ ಯಾನೆ ಸಬಾಸ್ಟಿಯನ್ ಎಂದು ಗುರುತಿಸಲಾಗಿದೆ. ಹೈದರಾಬಾದ್ ನ ಮಲಕಾಜ್ ಗಿರಿ ಸಮೀಪದ ಆನಂದ ಭಾಗ್ ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.
ತಂಗಚ್ಚನ್ ಮೂರು ವರ್ಷಗಳ ಹಿಂದೆ ಕೊಲೆ ಪ್ರಕರಣದಲ್ಲೂ ಭಾಗಿಯಾಗಿದ್ದ. ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ