Latest

ಎ ಎಸ್ ಐ ಕೊರೊನಾ ಸೋಂಕಿಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ ಎ ಎಸ್ ಐ ಒಬ್ಬರು ಬಲಿಯಾಗಿದ್ದಾರೆ. ಅನಾರೋಗ್ಯದ ಕಾರಣಕ್ಕಾಗಿ ಎ ಎಸ್ ಐ ರಜೆಯಲ್ಲಿದ್ದರು. ಆದಾಗ್ಯೂ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ಆತಂಕ ಹೆಚ್ಚಿಸಿದೆ.

ವಿ.ವಿ ಪುರಂ ಸಂಚಾರಿ ಠಾಣೆ ಎ ಎಸ್ ಐ ಕೊರೊನಾದಿಂದ ಮೃತಪಟ್ಟಿದ್ದಾರೆ. ಡಯಾಬಿಟೀಸ್ ನಿಂದ ಬಳಲುತ್ತಿದ್ದ ಇವರು ಕೆಲ ದಿನಗಳಿಂದ ಮನೆಯಲ್ಲೇ ಇದ್ದರು. ಬಳಿಕ ಜೂನ್ 13ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.

ಮೇ ತಿಂಗಳಲ್ಲಿ ಎ ಎಸ್ ಐ ಗೆ ಕೊರೊನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿತ್ತು. ಇದೀಗ ಮೂರು ದಿನಗಳ ಹಿಂದೆ ಅನಾರೋಗ್ಯಕ್ಕೀಡಾಗಿದ್ದ ಎ ಎಸ್ ಐ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅನಾರೋಗ್ಯಕ್ಕೀಡಾದ ಹಿನ್ನಲೆಯಲ್ಲಿ ಮತ್ತೆ ಅವರನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ ಕೊರೊನಾ ಸೋಂಕಿನಿಂದಲೇ ಎ ಎಸ್ ಐ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಇನ್ನೊಂದು ಆಘಾತಕಾರಿ ವಿಷಯವೆಂದರೆ ವಿವಿ ಪುರಂ ಸಂಚಾರಿ ಠಾಣೆಯ ಮತ್ತೋರ್ವ ಎ ಎಸ್ ಐ ಅವರಿಗೂ ಕೊರೊನಾ ಪಾಸಿಟೀವ್ ಬಂದಿದ್ದು, ಇದೀಗ ಅವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button