ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಅಸ್ನಾ ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆ, ಪ್ರವಾಹಪರಿಸ್ಥಿತಿಯುಂಟಾಗಿದೆ. ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಅಸ್ನಾ ಚಂಡಮಾರುತ ತೀವ್ರಗೊಂಡಿದ್ದು, ಗುಜರಾತ್ ನ ಸೌರಷ್ಟ್ರ, ಕಚ್ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಪ್ರವಾಹವುಂಟಾಗಿದೆ. ಈ ನಡುವೆ ಕರ್ನಾಟಕದ ಕರಾವಳಿಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದು ಕರ್ನಾಟಕದ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಸ್ನಾ ಚಂಡಮಾರುತ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ