Kannada NewsKarnataka NewsLatest

ಶಿವ ಚರಿತ್ರೆ ಉದ್ಘಾಟನೆಗೆ ಆಸ್ಸಾಂ ಮುಖ್ಯಮಂತ್ರಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಗುರುವಾರ ನಡೆಯಲಿರುವ ಶಿವಚರಿತ್ರೆ ಉದ್ಘಾಟನೆ ಸಮಾರಂಭಕ್ಕೆ ಆಸ್ಸಾಂ ಮುಖ್ಯಮಂತ್ರಿ, ಪ್ರಖರ ಹಿಂದುತ್ವವಾದಿ ಹಿಮಂತ ಬಿಸ್ವಾ ಶರ್ಮಾ ಸಹ ಆಗಮಿಸಲಿದ್ದಾರೆ.

ಇಲ್ಲಿನ ಶಹಾಪುರದ ಛತ್ರಪತಿ ಶಿವಾಜಿ ಉದ್ಯಾನವನ ಬಳಿ ಮಾ.16ರಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕನಸಿನ ಕೂಸಾದ ‘ಶಿವಚರಿತ್ರ’ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಜೆ 5.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಶಾಸಕ ಬಸನಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.

Home add -Advt

ಆಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೂ ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.

Related Articles

Back to top button