
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ಜಿಲ್ಲಾ ಮಹಿಳಾ ಕಾರ್ಯದರ್ಶಿಯೊಬ್ಬರ ಮೃತದೇಹ ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾಗಿರುವ ಘಟನೆ ಅಸ್ಸಾಂ ನಲ್ಲಿ ನಡೆದಿದೆ.
ಇಲ್ಲಿನ ಗೋಲ್ ಪಾರಾ ಜಿಲ್ಲಾ ಕಾರ್ಯದರ್ಶಿ ಜೊನಾಲಿ ನಾಥ್ ಅವರ ಮೃತದೇಹ ಕೃಷ್ಣೈ ಸಲ್ಪಾರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾಗಿದೆ.
ಜೊನಾಲಿ ನಾಥ್ ಅವರು ವೈಯಕ್ತಿಕ ಕೆಲಸಕ್ಕಾಗಿ ಪಕ್ಕದ ಇಸ್ಲಾಂಪುರಕ್ಕೆ ತೆರಳಿದ್ದರು ಎಂದು ಅವರ ಕುಟುಂಬದವರು ಹೇಳಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ಗೋಲ್ ಪಾರಾ ಎಸ್ ಪಿ ವಿ.ವಿ.ರಾಕೇಶ್ ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಭಬೇಶ್ ಕಲಿತಾ ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ