CrimeKannada NewsLatestNational

*ಭೀಕರ ಗುಂಡಿನ ದಾಳಿ*: *ಹೋಟೆಲ್ ಒಡತಿ, ಮಗ ಸೇರಿ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ಬಳಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹೋಟೆಲ್ ಮಾಲಕಿ ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೋಟೆಲ್ ಬಿಲಾಸ್ ಇನ್ ಬಳಿ ಸೋಮವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಹೋಟೆಲ್ ಓನರ್ ಹೆಲೆನಾ ಬರಾಲಿ ಮತ್ತು ಮಗ ಸೇರಿದಂತೆ ಐವರು ಮೃತಪಟ್ಟಿದ್ದಾರೆ

ಹೋಟೆಲ್ ಒಡತಿ ಹೆಲೆನಾ ಬರಾಲಿ, ಆಕೆಯ ಮಗ, ದೇಬರ್ಶಿ ಕಶ್ಯಪ್, ನಾರಾಯಣ್ ದಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಕೇವಲ ಒಂದು ಗಂಟೆಯೊಳಗೆ ದಾಳಿಕೋರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಸ್ಸಾಂ ರಾಜಧಾಅನಿ ಗುವಾಹಟಿಯಲ್ಲಿ ಈ ಘಟನೆ ನಡೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಹೋಟೆಲ್ ಗುತ್ತಿಗೆ ಒಪ್ಪಂದ ಹಾಗೂ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕರ ಕಡೆಯವರು ಹಾಗೂ ಗುತ್ತಿಗೆ ಪಡೆದವರ ನಡುವಿನ ವಾಗ್ವಾದವೇ ಈ ಮಾರಣಾಹಾಮಿಕ ದಾಳಿಗೆ ಕಾರಣ ಎಂದು ಶಂಕಿಸಲಾಗಿದೆ.

ಆರೋಪಿಯನ್ನು ಘನಕಾಂತ ಗೊಗೊಯ್ ಎಂದು ಗುರುತಿಸಲಾಗಿದ್ದು, ಪೊಲೀಸರು ಕೃತ್ಯಕ್ಕೆ ಬಳಸಿದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಂಡಿದ್ದಾರೆ. ಪ್ರಾಣ ಕಳೆದುಕೊಂಡಿರುವ ಐವರಲ್ಲಿ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮತ್ತೊಬ್ಬರು ಹಾಗೂ ಗಾಯಗೊಂಡಿರುವ ವ್ಯಕ್ತಿ ಅದೇ ಗ್ರಾಮಕ್ಕೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button