ಪ್ರಗತಿವಾಹಿನಿ ಸುದ್ದಿ; ಗುವಾಹಟಿ; ಅಸ್ಸಾಂ ನೂತನ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವ ಸರ್ಮ ಆಯ್ಕೆಯಾಗಿದ್ದಾರೆ. ಗುವಾಹಟಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಮಾಂತ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಮೂಲಕ ಸತತ ಎರಡನೇ ಬಾರಿ ಅಸ್ಸಾಂ ನಲ್ಲಿ ಬಿಜೆಪಿ ಅಧಿಕಾರಕ್ಕೇರಿದ್ದು, ಹಿಮಾಂತ ಬಿಸ್ವ ಸರ್ಮ ಹಿಂದಿನ ಸರ್ಬಾನಂದ್ ಸೋನಾಲಾಲ್ ನೇತೃತ್ವದ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಒಂದು ಕಾಲದಲ್ಲಿ ಕಾಂಗ್ರೆಸ್ ನಾಯಕರಾಗಿದ್ದ ಹಿಮಾಂತ, ಬಿಜೆಪಿಗೆ ವಲಸೆ ಬಂದಿದ್ದರು. ಇನ್ನು ಇತ್ತೀಚೆಗೆ ನಡೆದ ಅಸ್ಸಾಂ ಚುನಾವಣೆಯಲ್ಲಿ ಬಿಜೆಪಿ 75 ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ, ಕಾಂಗ್ರೆಸ್ 50 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು
10 ಕೆಜಿ ಅಕ್ಕಿ, 10,000 ರೂ ಆರ್ಥಿಕನೆರವು ನೀಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ