
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಆದರೆ ಕೊರೊನಾ ಸೋಂಕಿನ ಕಾರಣಕ್ಕೆ ಅಧಿವೇಶನವನ್ನು ಮೂರೇ ದಿನಕ್ಕೆ ಮೊಟಕುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, 60-70 ಶಾಸಕರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಹಲವರು ಹೋಂ ಐಸೋಲೇಷನ್ ನಲ್ಲಿ ಇದ್ದಾರೆ. ಹೀಗಾಗಿ ಅಧಿವೇಶನವನ್ನು ಮೊಟಕುಗೊಳಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದರು.
ಅಧಿವೇಶನ ಮೊಟಕುಗೊಳಿಸುವ ಬಗ್ಗೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ, ವಿಪಕ್ಷಗಳ ಅಭಿಪ್ರಾಯವನ್ನು ಪಡೆದು ನಿರ್ಧರಿಸಲಾಗುವುದು ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರ ಸೂಚನೆಗಾಗಿ ಕಾಯುತ್ತಿದ್ದೇನೆ. ಹೈಕಮಾಂಡ್ ನಿಂದ ಈ ವರೆಗೆ ಯಾವುದೇ ಸೂಚನೆ ಬಂದಿಲ್ಲ. ವರಿಷ್ಠರು ಸೂಚಿಸಿದ ಬಳಿಕ ಸಂಪುಟ ವಿಸ್ತರಣೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ