ಪ್ರಗತಿವಾಹಿನಿ ಸುದ್ದಿ: ಸಿಸಿಟಿವಿ ಕ್ಯಾಮೆರಾ ಎದುರಲ್ಲೇ ಕಲಬುರಗಿ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸವಿತಾ ನಾಯಕ ಲಂಚ ಸ್ವೀಕರಿಸಿರಿಸಿದ ಹಿನ್ನೆಲೆ ಅಮಾನತುಗೊಳಿಸಿ ಇಲಾಖೆಯ ನಿರ್ದೇಶಕ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.
ಎಪಿಎಂಸಿಗೆ ಬರುತ್ತಿದ್ದ ವರ್ತಕರಿಂದ ಲಂಚ ಸ್ವೀಕರಿಸುತ್ತಿದ್ದ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಕುರಿತು ಮಹಾಂತಗೌಡ ಎಂಬುವವರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಮಾಡಿದ್ದ ಹಿನ್ನೆಲೆಯಲ್ಲಿ ಲಂಚ ಸ್ವೀಕಾರ ಆರೋಪದ ಕುರಿತು ವ್ಯಾಪಕ ಚರ್ಚೆ ನಡೆದಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಜೇವರ್ಗಿ ಪಟ್ಟಣದಲ್ಲಿ ವರ್ತಕರಿಂದ ಲಂಚ ಸ್ವೀಕರಿಸುತ್ತಿರುವುದು ಪತ್ತೆಯಾಗಿತ್ತು ಎನ್ನಲಾಗಿದೆ.
ಕಚೇರಿ ಸಮಯ ಮುಗಿದ ಬಳಿಕ ಜೀಪ್‌ನಲ್ಲಿ ಬಂದು ಸಹಾಯಕ ನಿರ್ದೇಶಕಿ ಲಂಚ ಸ್ವೀಕರಿಸಿದ್ದರು ಎಂದು ಹೇಳಲಾಗಿದ್ದು, 5 ಲಕ್ಷ ರೂ. ಲಂಚ ಸ್ವೀಕರಿಸಿದ್ದಾರೆ ಎಂದು ರೈತಪರ ಸಂಘಟನೆಯೊಂದು ಆರೋಪ ಮಾಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ