Kannada NewsKarnataka NewsNationalPoliticsTechWorld
*ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಸಂಗಡಿಗರು*

ಪ್ರಗತಿವಾಹಿನಿ ಸುದ್ದಿ: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಆಕ್ಸಿಯಮ್ -4 ಮಿಷನ್‌ನ ಇತರ ಮೂವರು ಗಗನಯಾತ್ರಿಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳ ವಾಸ್ತವ್ಯದ ನಂತರ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.
ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.01 ಕ್ಕೆ ಬಾಹ್ಯಾಕಾಶ ನೌಕೆ ಸಮುದ್ರದಲ್ಲಿ ಇಳಿದ ತಕ್ಷಣ, ಇಡೀ ದೇಶವೇ ಸಂಭ್ರಮ ಪಟ್ಟಿದೆ. ಇದರೊಂದಿಗೆ, ಶುಭಾಂಶು ಶುಕ್ಲಾ ಇತಿಹಾಸವನ್ನು ಸೃಷ್ಟಿಸಿದ್ದಾರೆ.
ಶುಭಾಂಶು ಶುಕ್ಲಾ 20 ದಿನಗಳು ಬಾಹ್ಯಾಕಾಶದಲ್ಲಿ ಮತ್ತು 18 ದಿನಗಳನ್ನು ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ನಂತರ ಇಂದು ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.
ಶುಭಾಂಶು ಶುಕ್ಲಾ ಮತ್ತು ಇತರ ಸಿಬ್ಬಂದಿಯನ್ನು ಹೊತ್ತ ಟ್ರ್ಯಾಗನ್ ಬಾಹ್ಯಾಕಾಶ ನೌಕೆ ಕ್ಯಾಪ್ಸುಲ್ ಕ್ಯಾಲಿಫೋರ್ನಿಯಾ ಸಮುದ್ರದಲ್ಲಿ ಲ್ಯಾಂಡ್ ಆಗಿದೆ.
ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ನೌಕೆ ಸೋಮವಾರ ಸಂಜೆ ಸುಮಾರು 4.45 ರ ಸುಮಾರಿಗೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಅನ್‌ಡಾಕ್ ಆಗಿತ್ತು.