
ಪ್ರಗತಿವಾಹಿನಿ ಸುದ್ದಿ: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ಪೂರೈಕೆಯಲ್ಲಿ ಇನ್ನಷ್ಟು ಸುಧಾರಣೆ ತರುವ ಉದ್ದೇಶದಿಂದ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪ್ರಸ್ತುತ ನಗರ ಫೀಡರ್ ಮೂಲಕವೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ.
ವಿದ್ಯುತ್ ನಿರ್ಹವಣೆ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ತುಮಕೂರು ಹೊರ ವಲಯದಲ್ಲಿ ಬರುವ ಕೆಲವು ಹಳ್ಳಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಈ ಕೆಳಗಿನ ಪ್ರದೇಶಗಳಲ್ಲಿ ದಿನ ಬಿಟ್ಟು ದಿನ ವಿದ್ಯುತ್ ವ್ಯತ್ಯಯ ಆಗಲಿದೆ.
ಗೋವಿಂದನಗರ, ಹೌಸಿಂಗ್ ಬೋರ್ಡ್ , ಗುಬ್ಬಿ ಗೇಟ್ ಕುಂಟಮ್ಮನತೋಟ, ದಿಬ್ಬೂರು , ಬಿ.ಎಚ್. ಪಾಳ್ಯ, ಹಾರೋನಹಳ್ಳಿ ಹಾಗೂ ಹೊನ್ನೆನಹಳ್ಳಿಯಲ್ಲಿ ಫೆಬ್ರವರಿ 24 ಹಾಗೂ 27 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಹನುಮಂತಪುರ, ಕುವೆಂಪುನಗರ, ಆದರ್ಶನಗರ , ಆಣೆತೋಟ, ಜಗನ್ನಾಥನಗರ, ಶಾರದಾದೇವಿ ನಗರ, ಗಣೇಶನಗರ ಹಾಗೂ ನಿರ್ವಾಣಿ ಬಡಾವಣೆಯಲ್ಲಿ ಫೆಬ್ರವರಿ 28 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ನಿರ್ಹವಣೆ ಕಾಮಗಾರಿ ಕೆಲವೇ ಪ್ರದೇಶಗಳಿಗೆ ಸೀಮಿತಗೊಂಡಿರುವುದರಿಂದ ತುಮಕೂರು ನಗರ ಹಾಗೂ ಕೈಗಾರಿಕೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.