
ಪ್ರಗತಿವಾಹಿನಿ ಸುದ್ದಿ, ಅಥಣಿ : ಶಾಸಕ ಲಕ್ಷ್ಮಣ ಸವದಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಖಿಳೇಗಾಂವ್ ಗ್ರಾಮದ ಅಣ್ಣಪ್ಪ ನಿಂಬಾಳ (58) ಎನ್ನುವವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಬುಧವಾರ ಸಂಜೆ ದೇವಸ್ಥಾನದಿಂದ ಬರುವಾಗ 5 -6 ಜನ ಮುಸುಕುದಾರಿಗಳ ಗುಂಪು ನಿಂಬಾಳ ಅವರನ್ನು ರಸ್ತೆಯಲ್ಲೇ ನಿರ್ಧಯವಾಗಿ ಕೊಚ್ಚಿ ಹಾಕಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಕೆಲವೇ ಕ್ಷಣಗಳಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಸುದ್ದಿ ತಿಳಿದ ತಕ್ಷಣ ಶಾಸಕ ಲಕ್ಷ್ಮಣ ಸವದಿ ಆಸ್ಪತ್ರೆಗೆ ಧಾವಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ