ಪ್ರಗತಿವಾಹಿನಿ ಸುದ್ದಿ; ಅಥಣಿ: ಅಥಣಿಯಿಂದ ಬಿಜಾಪುರದ ವರೆಗೆ ಸುಮಾರು 80 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಿಕೊಡುವಂತೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ 80 ಕಿಲೋಮೀಟರ್ ರಸ್ತೆ ಅಭಿವೃದ್ಧಿಪಡಿಸಲು 497 ಕೋಟಿ ರೂಪಾಯಿಗಳ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಅಥಣಿ ಹಾಗೂ ಬಿಜಾಪುರದ ನಡುವೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಬೆಳಗಾವಿ ಗ್ರಾಮೀಣದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ