Kannada NewsLatest

*ಬೆಳಗಾವಿ: ದೇವಸ್ಥಾನದ ಬಳಿಯೇ ಆತ್ಮಹತ್ಯೆಗೆ ಶರಣಾದ ASI*

ಪ್ರಗತಿವಾಹಿನಿ ಸುದ್ದಿ; ಅಥಣಿ: ಎಎಸ್ ಐ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಅಥಣಿ ಪೊಲಿಸ್ ಠಾಣೆಯ ಎ ಎಸ್ ಐ ರಾಮಲಿಂಗ ಭೀಮಪ್ಪ ನಾಯಕ್ (51) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರೂಗೇರಿಯ ಕುರಬಗೋಡಿ ಬೀರಪ್ಪ ದೇವಸ್ಥಾನದ ಹತ್ತಿರ ನಯಲಾನ್ ಹಗ್ಗದಿಂದ ನೇಣು ಹಾಕಿಕೊಂಡಿದ್ದಾರೆ.

ರಾಮಲಿಂಗ ನಾಯಕ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬದಿಲ್ಲ. ಆದರೆ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಘಟನಾಸ್ಥಳಕ್ಕೆ ಹಾರೂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

ರಾಮಲಿಂಗ ನಾಯಿಕ ಗೋಕಾಕ ತಾಲೂಕಿನ ಮಣ್ಣಿಕೇರಿಯವರು. 1997ರ ಮೇ 21ರಂದು ಕೆಲಕ್ಕೆ ಸೇರಿದ್ದರು. ಅವರಿಗೆ ಪತ್ನಿ, ಓರ್ವ ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಮೈ ಶುಗರ್ ನಲ್ಲಿ ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://pragati.taskdun.com/ethanol-unit-set-upmysugarnext-yearcm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button