*ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸರ್ಕರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27ರಂದು ಚಾಲನೆ ನಿಡಲಾಗುತ್ತಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅಥಣಿ ಪಟ್ಟಣದಲ್ಲಿ ಬಸವಣ್ಣ ಮೂರ್ತಿ ಅನಾವರಣ ಮಾಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಅಶ್ವಾರೂಢ ಬಸವೇಶ್ವರರ ಮೂರ್ತಿಯನ್ನು ಅನಾವರಣ ಮಾಡಿದ್ದೇವೆ. 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಮಹಾಪುರುಷ ಬಸವಣ್ಣನವರು. ಜಿಡ್ಡುಗಟ್ಟಿದ ಸಮಾಜಿಕ ವ್ಯವಸ್ಥೆ ಕಿತ್ತೊಗೆದು, ಮಾನವೀಯತೆಯಿಂದ ಕೂಡಿದ ಹೊಸ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ ಮಹಾ ಪುರುಷ ಬಸವಣ್ಣನವರು. ಇಂದು ಅಂತಹ ಮಹಾಪುರುಷರ ಪ್ರತಿಮೆಯನ್ನು ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಅನಾವರಣ ಮಾಡಲಾಗಿದೆ ಎಂದರು.
ಬಸವಣ್ಣನವರು ನುಡಿದಂತೆ ನಡೆದವರು. ಹಾಗೇ ನಮ್ಮ ಸರ್ಕಾರ ಕೂಡ ನುಡಿದಂತೆ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಯತ್ನಿಸುತ್ತಿದ್ದೇವೆ. 5 ಗ್ಯಾರಂಟಿಗಳಲ್ಲಿ ಮೂರು ಗ್ಯಾರಂಟಿಗಳನ್ನು ಈಗಾಗಲೆ ಜಾರಿಗೆ ತಂದಿದ್ದೇವೆ. ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ