Belagavi NewsBelgaum NewsKannada NewsKarnataka NewsLatestPolitics
*ಅಥಣಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್*


ಪ್ರಗತಿವಾಹಿನಿ ಸುದ್ದಿ; ಅಥಣಿ: ಅಥಣಿ ಪಟ್ಟಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದು, ಮಾಜಿ ಡಿಸಿಎಂ ಅಥಣಿ ಶಾಸಕ ಲಕ್ಷ್ಮಣ ಸವದಿ ಸ್ವಾಗತಿಸಿದರು.
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅಥಣಿ ಪಟ್ಟಣಕ್ಕೆ ಭೇಟಿ ನೀಡಿದ್ದು, ಈ ವೇಳೆ ಬಸವಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹಲವು ಸಚಿವರು, ಶಾಸಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ