ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.
ವಿಧಾನ ಪರಿಷತ್ ಚುನಾವಣೆ ಮುಗಿಯುವವರೆಗೆ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ತೆಗೆದು ಹಾಕಿದ್ದು, ಅಲ್ಲಿಯವರೆಗೆ ಕರ್ತವ್ಯ ನಿರ್ವಹಣೆಗೆ ಬೇರೆ ತಹಶೀಲ್ದಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಅಥಣಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರಲು ಬಂದಿದ್ದ ಕೆಲ ಅರ್ಜಿಗಳ ಡಾಟಾ ಎಂಟ್ರಿ ಆಗಿರಲಿಲ್ಲ ಎನ್ನುವುದು ವಿಚಾರಣೆ ನಡೆಸಿದಾಗ ತಿಳಿದುಬಂದಿದ್ದು, ಹೀಗಾಗಿ ಅಥಣಿ ತಹಶೀಲ್ದಾರ್ ಅವರನ್ನು ಚುನಾವಣೆ ಮುಗಿಯುವವರೆಗೆ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ವಿವರಿಸಿದರು.
ರಾಜ್ಯದ ಅಭಿವೃದ್ಧಿಯಲ್ಲಿ ಕೆ.ಎಲ್.ಇ ಸೊಸೈಟಿ ಕೊಡುಗೆ ಅಪಾರ – CM ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ