ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಏಟ್ರಿಯಾ ವಿಶ್ವವಿದ್ಯಾಲಯ ಹಾಗೂ ಗ್ರೀನ್ ಫ್ಯೂಚರ್ ಸಮ್ಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಉದ್ಯಮಿಗಳೊಂದಿಗೆ ಸಂವಾದ ನಡೆಸಿದರು.
ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಪರ್ಯಾಯವಾಗಿ ನವೀಕರಣ ಇಂಧನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಲಿದೆ. ಪ್ರಮುಖವಾಗಿ ಹೈಡ್ರೊಜನ್ ಉದ್ಯಮದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಯಾಗಲಿದ್ದು, ಕಡಿಮೆ ದರದಲ್ಲಿ ಇಂಧನ ದೊರೆಯುವಂತೆ ಮಾಡಲು ಸಾಕಷ್ಟ ಸಂಶೋಧನೆ ನಡೆಯುತ್ತಿದೆ ಎಂದರು.
ಮುಂದಿನ 5 ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ದರ ಕಡಿಮೆಯಾಗಲಿದೆ:
ಮುಂದಿನ ಐದು ವರ್ಷಗಳಲ್ಲಿ ನಗರಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗಲಿದ್ದು, ಎಲೆಕ್ಟಿಕ್ ವಾಹನಗಳ ದರವೂ ಕಡಿಮೆಯಾಗಲಿದೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಖಾಸಗಿಯವರ ಪಾತ್ರವೂ ದೊಡ್ಡದಿದೆ. ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಸಹಯೋಗ ಮಾಡಿಕೊಂಡು ಕಾರ್ಯ ನಿರ್ವಹಿಸಬಹುದು ಎಂದು ತಿಳಿಸಿದರು.
ಭಾರತದಲ್ಲಿ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಇಲ್ಲಿ ಉದ್ಯೋಗ ಸೃಷ್ಟಿಸುವುದು ದೊಡ್ಡ ಜವಾಬ್ದಾರಿ. ಮಾನವ ಸಂಪನ್ಮೂಲ ಹಾಗೂ ತಂತ್ರಜ್ಞಾನ ಹೊಂದಾಣಿಕೆ ಮಾಡಿಕೊಂಡು ಶಿಕ್ಷಣ ನೀಡುವ ವ್ಯವಸ್ಥೆಯಾಗಬೇಕು ಎಂದರು.
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಏಟ್ರಿಯಾ ಗುಂಪಿನ ಅಧ್ಯಕ್ಷ ಸಿ.ಎಸ್.ಸುಂದರರಾಜು ಮೊದಲಾದವರು ಉಪಸ್ಥಿತರಿದ್ದರು.
ಶರಾವತಿ ನದಿಗೆ ಬಿದ್ದ ಪ್ರಯಾಣಿಕರ ಬಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ