ಪ್ರಗತಿವಾಹಿನಿ ಸುದ್ದಿ: ದಲಿತರ ಮೇಲೆ ದೌರ್ಜನ್ಯ ಪ್ರಕರಣದ 98 ಆರೋಪಿಗಳಿಗೆ ಏಕಕಾಲಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು,ಕೋರ್ಟ್ ನೀಡಿರುವ ಈ ತೀರ್ಪು ಅಪರೂಪದ ಪ್ರಕರಣವಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಆರೋಪಿಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಒಟ್ಟು 101 ಆರೋಪಿಗಳನ್ನು ಬಂಧಿಸಲಾಗಿದ್ದು, 117 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 101 ಮಂದಿಗೆ ಶಿಕ್ಷೆ ವಿಧಿಸಲಾಗಿದ್ದು, 16 ಆರೋಪಿಗಳು ಮೃತಪಟ್ಟಿದ್ದಾರೆ. ಇನ್ನುಳಿದಂತೆ ಮೂವರು ಅಪರಾಧಿಗಳು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದ ಮೂವರು ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಆಗಸ್ಟ್ 28 , 2014 ರಂದು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರದಲ್ಲಿ ಇದೇ ಮರಕುಂಬಿ ಗ್ರಾಮದ ದಲಿತ ಸಮುದಾಯದ ಮಂಜುನಾಥ ಮತ್ತು ಸ್ನೇಹಿತರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಸವರ್ಣೀಯರು ಜಗಳ ಆರಂಭಿಸಿದ್ದರು. ಅಂದು ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. 2014ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಇತರ ಸಮುದಾಯದ ಕೆಲವರು ಬೆಂಕಿ ಹಚ್ಚಿದ್ದರು.ಅನೇಕ ದಲಿತ ಮುಖಂಡರು ಕೊಪ್ಪಳ ಜಿಲ್ಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದರು.
2014 ರಲ್ಲಿ, ಮರುಕುಂಬಿ ಗ್ರಾಮದ ದಲಿತ ನಿವಾಸಿಗಳ ಪ್ರದೇಶಕ್ಕೆ ನೂರಾರು ಜನರು ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದರು, ಘರ್ಷಣೆ ಭುಗಿಲೆದ್ದಿತು ಮತ್ತು ದಲಿತರಿಗೆ ಬೆಂಕಿ ಹಚ್ಚಲಾಯಿತು. ಗ್ರಾಮದ ಕ್ಷೌರಿಕ ಅಂಗಡಿ ಮತ್ತು ಹೋಟೆಲ್‌ಗಳಿಗೆ ದಲಿತರಿಗೆ ಪ್ರವೇಶ ನಿರಾಕರಿಸಿದ್ದೇ ಘರ್ಷಣೆಗೆ ಕಾರಣ ಎನ್ನಲಾಗಿದೆ. ಮೂರು ತಿಂಗಳಿನಿಂದ ಮರುಕುಂಬಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ