
ಪ್ರಗತಿವಾಹಿನಿ ಸುದ್ದಿ: ಅಪರಿಚಿತ ವ್ಯಕ್ತಿ ಓರ್ವ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಹಲ್ಲೆಗೆ ಇದುವರೆಗೂ ನಿಖರ ಕಾರಣ ತಿಳಿದುಬಂದಿಲ್ಲ. ಜನ ಸುವಾಯಿ ಎಂಬ ಕಾರ್ಯಕ್ರಮ ನಡೆಸುವ ರೇಖಾ ಗುಪ್ತಾ ಅವರು ಖುದ್ದಾಗಿ ಜನರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸುತ್ತಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ವೇಳೆ ರೇಖಾ ಗುಪ್ತಾ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.
ಘಟನೆಯಲ್ಲಿ ರೇಖಾ ಗುಪ್ತಾ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಕೂಡಲೇ ಭದ್ರತಾ ಸಿಬ್ಬಂದಿಗಳು ರೇಖಾ ಗುಪ್ತಾರನ್ನು ರಕ್ಷಿಸಿ, ಅಪರಿಚಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ದುಷ್ಕರ್ಮಿ ದೂರುದಾರರ ಸೋಗಿನಲ್ಲಿ ಸರದಿ ಸಾಲಿನಲ್ಲಿ ಬಂದು ನಿಂತಿದ್ದ. ಸಿಎಂ ರೇಖಾ ಗುಪ್ತಾ ಅವರನ್ನು ಭೇಟಿಯಾಗಲು ತನ್ನ ಸರದಿ ಬಂದಾಗ ಹಲ್ಲೆಗೆ ಯತ್ನಿಸಿದ್ದಾನೆಂದು ತಿಳಿದುಬಂದಿದೆ.
ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ. ಪೊಲೀಸರು ವಿಚಾರಣೆಯಿಂದಷ್ಟೇ ಇನ್ನಷ್ಟು ಮಾಹಿತಿ ಹೊರಬರಬೇಕಿದೆ.