
ಪ್ರಗತಿವಾಹಿನಿ ಸುದ್ದಿ: ಗುಂಪುಕಟ್ಟಿಕೊಂಡು ತಡ ರಾತ್ರಿಯವರೆಗೂ ನಿಂತಿದ್ದ ಜನರನ್ನು ಪ್ರಶ್ನಿಸಿದ ಪಿಎಸ್‌ಐ ಮೇಲೆಯೇ ಗ್ಯಾಂಗ್ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗದದಲ್ಲಿ ನಡೆದಿದೆ.
ಚಿತ್ರದುರ್ಗದ ಖಾಸಗಿ ಹೋಟೆಲ್ ಒಂದರ ಬಳಿ ತುರುವನೂರು ರಸ್ತೆಯ ಸಮೀಪ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ & ಗ್ಯಾಂಗ್ ತಡರಾತ್ರಿಯಲ್ಲಿ ನಿಂತಿದ್ದರು. ಈ ವೇಳೆ ರಸ್ತೆಯಲ್ಲಿ ಏನು ಮಾಡುತ್ತಿದ್ದೀರಿ ಎಂದು ನಗರಠಾಣೆ ಪಿಎಸ್‌ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಈ ಗ್ಯಾಂಗ್ PSI ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಹಲ್ಲೆ ವೇಳೆ ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈಬೆರಳಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.ಸದ್ಯ ಈ ಪ್ರಕರಣದಲ್ಲಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.