*ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪೊಲೀಸ್ ಎನ್ ಕೌಂಟರ್ ಗೆ ಬಲಿ*
ಪ್ರಗತಿವಾಹಿನಿ ಸುದ್ದಿ; ಅಯೋಧ್ಯಾ: ಸರಯು ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಆರೋಪಿ ಉತ್ತರ ಪ್ರದೇಶ ಪೊಲೀಸರ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾನೆ.
ಅನೀಸ್ ಖಾನ್ ಮೃತ ಆರೋಪಿ. ಆಗಸ್ಟ್ 30ರಂದು ರೈಲ್ವೆ ಕಂಪಾರ್ಟ್ ಮೆಂಟ್ ನಲ್ಲಿ ಅನೀಸ್ ಖಾನ್ ಎಂಬ ವ್ಯಕ್ತಿ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಮಹಿಳಾ ಪೊಲೀಸ್ ಸಿಬ್ಬಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಅವರ ಮುಖ ಹಾಗೂ ತಲೆಯ ಭಾಗಕ್ಕೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಮಹಿಳಾ ಪೊಲಿಸ್ ಸಿಬ್ಬಂದಿಯನ್ನು ಅಯೋಧ್ಯಾ ಕೆಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿತ್ತು. ಈ ಪ್ರಕರಣದಲ್ಲಿ ಇದೀಗ ಆರೋಪಿ ಅನೀಸ್ ಖಾನ್ ನನ್ನು ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ಪೊಲಿಸರು ಆರೋಪಿಯನ್ನು ಬಂಧಿಸಲು ಮುಂದಾದ ವೇಳೆ ಆರೋಪಿ ಹಾಗೂ ಆತನ ಗ್ಯಾಂಗ್ ಪೊಲೀಸರ ಮೇಲೆ ದಾಳಿ ನಡೆಸಿದೆ. ಈ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಎನ್ ಕೌಂಟರ್ ನಲ್ಲಿ ಅನೀಸ್ ಬಲಿಯಾಗಿದ್ದಾನೆ. ಆತನ ಜೊತೆಗಿದ್ದ ಆಜಾದ್ ಖಾನ್ ಹಾಗೂ ವಿಶಂಭರ್ ದಯಾಳ್ ಎಂಬುವವರು ಗಾಯಗೊಂಡಿದ್ದಾರೆ.
ಅಲ್ಲದೇ ಎನ್ ಕೌಂಟರ್ ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಅಧಿಕಾರಿಯು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ