Latest

*ಆರೋಪಿ ಕರೆದೊಯ್ಯುವ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಕಳ್ಳತನ, ದರೋಡೆ ಪ್ರಕರಣದ ಆರೋಪಿಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಗದಗದಲ್ಲಿ ನಡೆದಿದೆ.

ಗದಗ ಜಿಲ್ಲೆಯ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಪೊಲೀಸ್ ವಾಹನ ಅಡ್ಡಗಟ್ಟಿ, ಹಲ್ಲೆ ನಡೆಸಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಘಟನೆಯಲ್ಲಿ ನಲ್ವರು ಪೊಲೀಸರಿಗೆ ಗಾಯಗಳಾಗಿವೆ.

ಗಾಯಾಳು ಪೊಲೀಸರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗದಗ ಎಸ್.ಎಂ ಕೃಷ್ಣ ನಗರದಿಂದ ಆರೋಪಿ ಮೊಹಮ್ಮದ್ ಅಲಿ ಎಂಬಾತನನ್ನು ವಶಕ್ಕೆ ಪಡೆದು ವಾಹನದಲ್ಲಿ ತೆರಳುತ್ತಿದ್ದ ಗಂಗಾವತಿ ಪೊಲೀಸರ ಮೇಲೆ ನಾಲ್ವರು ದುಷ್ಕರ್ಮಿಗಳು ವಾಹನ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಬಳಿಕ ದುಷ್ಕರ್ಮಿಗಳು ಆರೋಪಿ ಸಮೇತ ಎಸ್ಕೇಪ್ ಆಗಿದ್ದಾರೆ.

Home add -Advt

ಹೆಡ್ ಕಾನ್ಸ್ ಟೇಬಲ್ ಮರಿ ಶಾಂತ ಗೌಡ, ಪಿಸಿ ಚಿರಂಜೀವಿ ಎ ಎಸ್ ಐ ಶಿವಶರಣ, ಪಿಸಿ ವಿಶ್ವನಾಥ್ ಎಂಬುವವರಿಗೆ ಗಾಯಗಳಾಗಿವೆ.


Related Articles

Back to top button