ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಖಾನಾಪುರ ರಸ್ತೆಯ ಆಶ್ರಯ ಎಂಪೈರ್ ಅಪಾರ್ಟಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದವರ ಮೇಲೆ ದಾಳಿ ಮಾಡಿ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ.
ಟಿಳಕವಾಡಿ ಪೊಲೀಸ್ ಇನಸ್ಪೆಕ್ಟರ್ ವಿನಾಯಕ ಬಡಿಗೇರ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.
ಆರೋಪಿ 37 ವರ್ಷದ ಮಹಿಳೆ (ಸಾ.ಚೆನ್ನಮ್ಮ ನಗರ, ಹಾಲಿ ಆಶ್ರಯ ಎಂಪೈರ್ ಅಪಾರ್ಟಮೆಂಟ ಅನಗೋಳ ಬೆಳಗಾವಿ) ಯನ್ನು ವಶಕ್ಕೆ ಪಡೆದುಕೊಂಡಿದ್ದು, ಅವಳಿಂದ ಇಬ್ಬರು ಮಹಿಳೆಯರನ್ನು ರಕ್ಷಿಸಿ, ಆರೋಪಿತಳ ವಿರುದ್ಧ ಟಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ