Belagavi NewsBelgaum NewsEducation

*6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆ*

ಪ್ರಗತಿವಾಹಿನಿ ಸುದ್ದಿ: ಪ್ರಸ್ತುತ ರಾಜ್ಯ ಪಠ್ಯಕ್ರಮದ ೬ ರಿಂದ ೧೦ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ (ಅಃSಇ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು.

Home add -Advt

ಪರಿಷತ್ ಸದಸ್ಯರಾದ ಎಂ.ಎಲ್.ಅನಿಲಕುಮಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಸೋಮವಾರ ಪರಿಷತನಲ್ಲಿ ಉತ್ತರಿಸಿದರು.

ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ ೧ ರಿಂದ ೮ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು; ೮ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲವಾಗಲಿದ್ದು, ಸರ್ಕಾರವು ಈ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಚಿಂತಿಸಿದೆಯೇ; ಇಲ್ಲದಿದ್ದಲ್ಲಿ ಯಾವ ಕಾಲಮಿತಿಯೊಳಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎನ್ನುವ ಅನಿಲ್ ಕುಮಾರ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಈ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Related Articles

Back to top button