*ಅನ್ನಭಾಗ್ಯ ಯೋಜನೆ ಅರ್ಹ ಫಲಾನುಭವಿಗಳ ಗಮನಕ್ಕೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಅರ್ಹ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಸರ್ಕಾರವು ಜುಲೈ- 2023 ಮಾಹೆಯಿಂದ ಜೂನ್- 2024 ರವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಜೊತೆಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ ಅಕ್ಕಿ ನೀಡುವ ಪ್ರಮುಖ ಯೋಜನೆಯಾಗಿದ್ದು, ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಕುಟುಂಬಕ್ಕೆ ಉಚಿತವಾಗಿ 35 ಕೆ.ಜಿ ಅಕ್ಕಿ ಹಾಗೂ ಪಿ.ಎಚ್.ಎಚ್ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಪ್ರತಿ ಮಾಹೆ ಇನ್ನುಳಿದ 5 ಕೆ.ಜಿ ಅಕ್ಕಿ ಬದಲಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪ್ರತಿ ಕೆ.ಜಿ.ಗೆ ರೂ. 34 ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ DBT ಮೂಲಕ ಹಣ ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಗಿರುತ್ತದೆ.
ಬ್ಯಾಂಕ್ ಖಾತೆಗೆ ಆಧಾರ, ಮೊಬೈಲ್ ಸಂಖ್ಯೆ ಜೋಡಣೆ (e-KYC) ಮಾಡಿಸಬೇಕು. ಹಾಗೂ ಆ ಬ್ಯಾಂಕ್ ಖಾತೆ ಸಕ್ರೀಯ ಚಾಲನೆಯಲ್ಲಿರಬೇಕು 03 ತಿಂಗಳಲ್ಲಿ ಒಂದು ಸಲ ಆದರೂ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ನೀಡಿ ಪಡಿತರ ಪಡೆದಿರತಕ್ಕದ್ದು, DBT ಮೂಲಕ ಹಣ ವರ್ಗಾವಣೆಯಾದ ಬಗ್ಗೆ ಅವರ ಮೊಬೈಲ್‌ಗೆ ಸಂದೇಶ ರವಾನೆ ಆಗಲಿದೆ, ಹಾಗೂ ಇತರೆ ವಿವರಗಳಿಗೆ ಆಹಾರ ಇಲಾಖೆಯ ಯುಅರ್ ಎಲ್ ಗೆ https://ahara.kar.nic.in/status2/status of dbt.aspx ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲೆಯಲ್ಲಿನ ಎಲ್ಲ ಫಲಾನುಭವಿಗಳು ಇದರ ಸದುಪಯೋಗ ಪಡದುಕೊಳ್ಳಬೇಕು ಎಂದು ಬೆಳಗಾವಿ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ