Kannada NewsKarnataka NewsLatest

ಭಾರತ ಜೊಡೋ ಪಾದಯಾತ್ರೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೊಡೋ ಪಾದಯಾತ್ರೆಯಲ್ಲಿ ಭಾಗವಹಿಸಲು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ತೆರಳಿದರು.

Home add -Advt

150ಕ್ಕೂ ಹೆಚ್ಚು ವಾಹನಗಳಲ್ಲಿ ಹೊರಟ ಕಾರ್ಯಕರ್ತರಿಗೆ ಚನ್ನರಾಜ ಹಟ್ಟಿಹೊಳಿ ಮಾರ್ಗದರ್ಶನ ಮಾಡಿ, ಕಾರ್ಯಕರ್ತರ ಜೊತೆಯೇ ತೆರಳಿದರು. ಎಲ್ಲರೂ ಸಂಜೆಯ ಹೊತ್ತಿಗೆ ಬಳ್ಳಾರಿಯಲ್ಲಿ ಪಾದಯಾತ್ರೆ ಸೇರಿಕೊಂಡರು.

ಪಾದಯಾತ್ರೆ ಕರ್ನಾಟಕ ಪ್ರವೇಶಿಸಿದ ದಿನದಿಂದಲೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಚನ್ನರಾಜ ಹಟ್ಟಿಹೊಳಿ ಮತ್ತು ಗ್ರಾಮೀಣ ಕ್ಷೇತ್ರದ ಸಹಸ್ರಾರು ಕಾರ್ಯಕರ್ತರು ಸೇರಿಕೊಂಡಿದ್ದಾರೆ.

ದೇಶದ ಜನರನ್ನು ಒಗ್ಗೂಡಿಸಲು ಬೃಹತ್ ‘ಭಾರತ್ ಜೋಡೊ ಪಾದಯಾತ್ರೆ’: ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾಹಿತಿ

https://pragati.taskdun.com/politics/belagavirural-mla-laxmihebbalkar-inform-bharatjodo-walk-organise-congress-party/

Related Articles

Back to top button