ಪ್ರಗತಿವಾಹಿನಿ ಸುದ್ದಿ: ಯುವನಿಧಿ ಯೋಜನೆಯ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸದರಿ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು.
ಸದರಿ ಘೋಷಣೆ ಮಾಡದೇ ಇರುವಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಈಗಾಗಲೇ ನೋಂದಾಯಿಸಿದ ಅಭ್ಯರ್ಥಿಗಳಿಗೆ ನಗದು ನೇರ ಹಣ ಜಮಾ ಆಗದೇ ಇರುವ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ಸುವರ್ಣ ವಿಧಾನಸೌಧದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.0831-2443948 ಸಂಖ್ಯೆಗೆ ಸಂಪರ್ಕಿಸಬಹುದು ಹಾಗೂ https://sevasindhugs.karnataka.gov.in ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ