ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನರು ಸಜೀವದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ಅತ್ತಿಬೆಲೆ ರಾಜಸ್ವ ನಿರೀಕ್ಷಕ ಪುಷ್ಪರಾಜ್, ಹಾಗೂ ಗ್ರಾಮ ಆಡಳಿತಾಧಿಕಾರಿ ಬಾಗೇಶ್ ಹೊಸಮನಿ ಅಮಾನತುಗೊಂಡವರು.
ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಪಟಾಕಿ ಅನ್ ಲೋಡ್ ಮಾಡುತ್ತಿದ್ದಗ ಏಕಾಏಕಿ ಬೆಂಕಿ ದುರಂತ ಸಂಭವಿಸಿ 14 ಜನರು ಸಜೀವ ದಹನವಾಗಿದ್ದರು. ಪಟಾಕಿ ಗೋಡೌನ್ ನಲ್ಲಿ ಸಾವಿರ ಕೆಜಿ ಮಾತ್ರ ಸ್ಟಾಕ್ ಮಡಲು ಅವಕಾಶವಿತ್ತು. ಆದರೆ ಪರವಾನಗಿ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೇ ಪರವಾನಗಿ ನೀಡಿದ್ದ ಹಿನ್ನೆಲೆಯಲ್ಲಿ ದುರಂತಕ್ಕೆ ಕಾರಣವಾಗಿದೆ ಎಂದು ನಾಲ್ಕು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ