Vikalachetanara Day
Cancer Hospital 2
Bottom Add. 3

*ಅತ್ತಿಬೆಲೆ ಪಟಾಕಿ ದುರಂತ: ಮತ್ತೋರ್ವ ವ್ಯಕ್ತಿ ಸಾವು; ಮೃತರ ಸಂಖ್ಯೆ 15ಕ್ಕೇರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆಯ ಪಟಾಕಿ ಗೋಡೌನ್ ನಲ್ಲಿ ನಡೆದಿದ್ದ ಬೆಂಕಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಬೆಂಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿನೇಶ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೇಯುಸಿರೆಳೆದಿದ್ದಾರೆ. ಈ ಮೂಲಕ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋಡೌನ್ ನಲ್ಲಿ ಪಟಾಕಿ ಅನ್ ಲೋಡ್ ಮಾಡುವ ವೇಳೆ ಬೆಂಕಿ ದುರಂತ ಸಂಭವಿಸಿ 14 ಜನರು ಸಜೀವ ದಹನವಾಗಿದ್ದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಗಂಭೀರವಾಗಿ ಗಾಯಗೊಂಡಿದ್ದ ದಿನೇಶ್ ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪುವ ಮೂಲಕ ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


Bottom Add3
Bottom Ad 2

You cannot copy content of this page