GIT add 2024-1
Laxmi Tai add
Beereshwara 33

*ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಶೀಘ್ರ ಪ್ರಾರಂಭ*

*Australian Consulate in Bangalore to open soon*

Anvekar 3
Cancer Hospital 2
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :  ಭಾರತದಲ್ಲಿ ಆಸ್ಟ್ರೇಲಿಯಾದ ಕಾನ್ಸಲ್‌ ಜನರಲ್‌ ಬ್ಯಾರಿ ಓʼ ಫ್ಯಾರೆಲ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿರ್ಧರಿಸಲಾಯಿತು.
ದೇಶದಲ್ಲಿ ಅತ್ಯಂತ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿಯೂ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲು ರಾಜ್ಯ ಉತ್ಸುಕವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.
ದಕ್ಷಿಣ ಭಾರತದ ಆಸ್ಟ್ರೇಲಿಯನ್ ಕಾನ್ಸಲ್ ಜನರಲ್ ಸಾರಾ ಕಿರ್ಲೆವ್, ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್ ನ ನಿಯೋಜಿತ ಡೆಪ್ಯುಟಿ ಕಾನ್ಸಲ್ ಜನರಲ್ ಹ್ಯುಂಗ್ – ಮಿನ್ ಕಿಮ್, ರಾಜ್ಯದ ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು
ಶಿವಕುಮಾರ ಜೊತೆ ಚರ್ಚೆ: ಬೆಂಗಳೂರಲ್ಲಿ ಸುಸಜ್ಜಿತ ರಸ್ತೆಗಳು, ಸುಗಮ ವಾಹನ ಸಂಚಾರಕ್ಕೆ ಅಗತ್ಯವಿರುವ ಯೋಜನೆ
 ಭಾರತದಲ್ಲಿ ಆಸ್ಟ್ರೇಲಿಯದ ಹೈ ಕಮಿಷನರ್ ಬ್ಯಾರಿ ಫರೆಲ್, ದಕ್ಷಿಣ ಭಾರತದ ಆಸ್ಟ್ರೇಲಿಯ ಕೌನ್ಸೆಲ್ ಜನರಲ್ ಸಾರಾ ಕಿರ್ಲೆವ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
*ಜಲ ಸಂಪನ್ಮೂಲ, ನಗರ ಅಭಿವೃದ್ಧಿ ಕುರಿತು ಆಸ್ಟ್ರೇಲಿಯ ಹೈಕಮಿಷನರ್ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಚರ್ಚೆ*
 ಆಸ್ಟ್ರೇಲಿಯ ಮತ್ತು ಕರ್ನಾಟಕ ಸರಕಾರದ ಸಹಭಾಗಿತ್ವದಲ್ಲಿ ಕರ್ನಾಟಕದಲ್ಲಿ ಜಲ ಸಂಪನ್ಮೂಲ, ಕೌಶಲ್ಯ ಹಾಗೂ ನಗರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ ಆಸ್ಟ್ರೇಲಿಯಾ ಹೈ ಕಮಿಷನರ್ ಬ್ಯಾರಿ ಫರೆಲ್ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಮಾಲೋಚನೆ ನಡೆಸಿದರು.
ಬ್ಯಾರಿ ಫರೆಲ್ ಅವರು, ದಕ್ಷಿಣ ಭಾರತದ ಕೌನ್ಸೆಲ್ ಜನರಲ್ ಸಾರಾ ಕಿರ್ಲೆವ್ ಜತೆ ಡಿ ಕೆ ಶಿವಕುಮಾರ್ ಅವರನ್ನು ಗುರುವಾರ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದ್ದರು.
ಯುವ ಸಮುದಾಯಕ್ಕೆ ಹೆಚ್ಚು ಉದ್ಯೋಗ ಅವಕಾಶಗಳು ಲಭ್ಯವಾಗುವಂತೆ ಯೋಜನೆಗಳನ್ನು ರೂಪಿಸಲು ಸಹಕರಿಸುವಂತೆ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು.
ಬೆಂಗಳೂರಲ್ಲಿ ಸುಸಜ್ಜಿತ ರಸ್ತೆಗಳು, ಸುಗಮ ವಾಹನ ಸಂಚಾರಕ್ಕೆ ಅಗತ್ಯವಿರುವ ಯೋಜನೆಗಳ ಅನುಷ್ಠಾನಕ್ಕೆ ಕೈ ಜೋಡಿಸುವಂತೆ ಅವರು ಹೇಳಿದರು.
ಅಭಿವೃದ್ಧಿ ಯೋಜನೆಗಳ ಪರಿಶೀಲನೆಗೆ ಆಸ್ಟ್ರೇಲಿಯಾಗೆ ಬರುವಂತೆ ಡಿ ಕೆ ಶಿವಕುಮಾರ್ ಅವರಿಗೆ ಬ್ಯಾರಿ ಫರೆಲ್ ಅಹ್ವಾನ ನೀಡಿದರು. ಖಂಡಿತ ಬರುವುದಾಗಿ ಶಿವಕುಮಾರ್ ಸಮ್ಮತಿಸಿದರು.
Emergency Service

https://pragati.taskdun.com/dcm-held-a-meeting-of-ex-mayors-will-the-corporation-ward-be-re-divided/

Bottom Add3
Bottom Ad 2