World

*ಶಾಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಗುಂಡಿನ ದಾಳಿಗೆ 11 ಜನರು ಬಲಿ*

ಪ್ರಗತಿವಾಹಿನಿ ಸುದ್ದಿ: ಶಾಲೆಯೊಂದರಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು ಏಕಾಏಕಿ ಗುಂಡಿನ ದಾಳಿ ಮ್ನಡೆಸಿದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ.

ಆಸ್ಟ್ರಿಯಾದ ಗ್ರಾಜ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಗ್ರಾಜ್ ಶಾಲೆಯ ಎರಡು ಕೊಠಡಿಗಳಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳು ಸೇರಿ 11 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಗುಂಡಿನ ದಾಳಿ ನಡೆಸಿದ ಓರ್ವ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Home add -Advt


Related Articles

Back to top button