Karnataka NewsLatestPolitics

*ಬರ ಪರಿಶೀಲನೆ: ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಬರ ಪರಿಸ್ಥಿತಿ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆ ಬರ ಪರಿಸ್ಥಿತಿ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಳಗಳಲ್ಲಿ ವಾಸವಿರಬೇಕು, ಜನರಿಗೆ ಲಭ್ಯವಿರಬೇಕು.

ತಾಲ್ಲೂಕು ಮಟ್ಟದ ಅಧಿಕಾರಿಗಳು ತಾಲ್ಲೂಕಿನಲ್ಲಿ ಇರಬೇಕು.

5ರಂದು ಪ್ರಜಾಸೇವೆ ಇಲಾಖೆ ಪ್ರಾರಂಭ ಮಾಡಲಾಗುತ್ತಿದೆ.

ಜಿಲ್ಲಾ ಸಚಿವರು ತಿಂಗಳಿಗೆ 2 ದಿನ ಸಭೆ ಮಾಡಲಾಗುವುದು, ಜನರಿಗೆ ಮುಂಚಿತವಾಗಿ ಅರ್ಜಿ ನೀಡಬೇಕು.

ಎಷ್ಟು ಸಾಧ್ಯವೋ ಅಷ್ಟು ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹಾರ ನೀಡಬೇಕು.

ಶಾಸಕರು ತಿಂಗಳಿಗೆ 4 ದಿನ ಪಂಚಾಯ್ತಿ ಮಟ್ಟದಲ್ಲಿ ಜನರ ಸಮಸ್ಯೆ ಆಲಿಸಬೇಕು, ಶಾಸಕರು ಹೋಗದಿದ್ದರೆ ಅಧಿಕಾರಿಗಳು ಜನರ ಬಳಿ ಹೋಗಬೇಕು.

ಸರ್ಕಾರ ನಿವೇಶನ ರಹಿತರಿಗೆ ನಿವೇಶನ ನೀಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

ನಿವೇಶನ ರಹಿತರು, ನಿವೇಶನಕ್ಕೆ ಅರ್ಜಿ ಹಾಕುವಾಗ ಸೂಕ್ತ ದಾಖಲೆ ನೀಡಬೇಕು.

ನಿವೇಶನ ಹೊಂದಿರುವವರು ಅರ್ಜಿ ಹಾಕಲು ಅವಕಾಶ ನೀಡಬಾರದು.

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ ಮಾಡಬೇಕು.

ಫಲಾನುಭವಿಗಳು ಅವರ ದೂರವಾಣಿ ಸಂಖ್ಯೆ ಕೊಡಬೇಕು.

ಮೂರನೇ ವ್ಯಕ್ತಿ ದೂರವಾಣಿ ಸಂಖ್ಯೆ, ಬ್ಯಾಂಕ್ ಖಾತೆ ಜೋಡಣೆ ಆಗಬಾರದು.

ಪಂಚಾಯ್ತಿ ಮಟ್ಟದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಮಾಡಬೇಕು.

ಶಾಸಕರು ಸಮಿತಿ ಮಾಡಬೇಕು, ಮಾಡದಿದ್ದರೆ ನಾವೇ ಮಾಡುತ್ತೇವೆ.

ಭಾರತ ಜೋಡೋ ಯುವ ಸಂಘ ನೋಂದಣಿ ಆನ್ ಲೈನ್ ಮಾಡಲಾಗುವುದು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರೆಡ್ಡಿ, ಶಾಸಕ ಎಚ್.ಕೆ. ಪಾಟೀಲ, ಸಿ.ಸಿ.ಪಾಟೀಲ, ಡಾ. ಚಂದ್ರು ಲಮಾಣಿ, ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ. ಆರ್ ಪಾಟೀಲ್, ಹೆಸ್ಕಾಂ ಅಧ್ಯಕ್ಷರಾದ ಅಜ್ಜಂಪೀರ್ ಖಾದ್ರಿ, ಕರ್ನಾಟಕದಲ್ಲಿ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ (ಪ್ರಕೃತಿ ವಿಕೋಪ) ವಿಭಾಗದ ಕಾರ್ಯದರ್ಶಿ ಹಾಗೂ ಪರಿಹಾರ ಆಯುಕ್ತರಾಗಿ ಮನೋಜ್ ಕುಮಾ‌ರ್ ಮೀನಾ ಅವರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button